ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು–ಕೇರಳದ ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ನೀಡಿದರು. ಈ ಹೊಸ ರೈಲು ಸೇವೆ ಎರಡೂ ರಾಜ್ಯಗಳ ನಡುವೆ ವೇಗದ ಮತ್ತು ಆರಾಮದಾಯಕ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ.
ಹೌದು ಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಭಾರತದಲ್ಲಿ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ವಿಭಾಗಕ್ಕೆ ಇದೀಗ ಮತ್ತು ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇರ್ಪಡೆಯಾಗಿದೆ. ಈ ರೈಲುಗಳು ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸಲಿವೆ.
ದೇಶದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಖ್ಯೆ 160 ಕ್ಕೆ ಏರಿದಂತಾಗಿದೆ. ಹೆಚ್ಚಿನ ರಾಷ್ಟ್ರಗಳ ಅಭಿವೃದ್ಧಿಯಲ್ಲಿ ಮೂಲಸೌಕರ್ಯವು ಪ್ರಮುಖ ಪಾತ್ರ ವಹಿಸಿದೆ. ಉತ್ತಮ ಸಂಪರ್ಕ ದೊರೆತ ತಕ್ಷಣ ನಗರದ ಅಭಿವೃದ್ಧಿಯು ತನ್ನಿಂತಾನೆ ಪ್ರಾರಂಭವಾಗುತ್ತದೆ. ಮೂಲಸೌಕರ್ಯವು ಬೃಹತ್ ಸೇತುವೆಗಳು ಮತ್ತು ಹೆದ್ದಾರಿಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


