ಉಡುಪಿ: ಇದೇ ತಿಂಗಳ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಕೃಷ್ಣನ ಸನ್ನಿಧಾನದಲ್ಲಿ ಭಗವದ್ಗೀತೆಯ ಶ್ಲೋಕ ಪಠಣವೂ ನಡೆಯಲಿದೆ. ಮುಂದಿನ ನವೆಂಬರ್ 28ರಂದು ಶ್ರೀ ಪುತ್ತಿಗೆ ಮಠ ವತಿಯಿಂದ ಹಮ್ಮಿಕೊಳ್ಳಲಿರುವ ವಿಶ್ವ ಗೀತಾ ಪರ್ಯಾಯ ಧಾರ್ಮಿಕ ಕಾರ್ಯಕ್ರಮದಲ್ಲಿ ದೇಶ–ವಿದೇಶದ ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ. ಸುಮಾರು 1.1 ಲಕ್ಷ ಮಂದಿ ಗೀತೆ ಪಠಿಸುವಲ್ಲಿ ತೊಡಗಿಸಿಕೊಳ್ಳಲಿದ್ದು, ಕೊನೆಯ 10 ನಿಮಿಷಗಳ ಕಾಲ ಪ್ರಧಾನಿ ಮೋದಿ ಭಗವದ್ಗೀತೆಯ ಹತ್ತು ಶ್ಲೋಕಗಳನ್ನು ಪಠಿಸಲಿದ್ದಾರೆ.
ಪ್ರಧಾನಿ ಅವರು ಅಂದು ಬೆಳಿಗ್ಗೆ 11 ಗಂಟೆಗೆ ಆಗಮಿಸಿ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿ, ಕನಕನ ಕಿಂಡಿಗೆ ಹೊಸ ಸುವರ್ಣ ಕವಚವನ್ನು ಅರ್ಪಣೆ ಮಾಡಲಿದ್ದಾರೆ. ಗೀತಾ ಮಂದಿರದಲ್ಲಿ ಸ್ವಾಮೀಜಿಗಳೊಂದಿಗೆ ಸಮಾಲೋಚನೆ ನಡೆಸಿ ಭೋಜನ ಪ್ರಸಾದ ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ಪೂರ್ಣಗೊಳಿಸಲಿದ್ದಾರೆ.
ಜಿಲ್ಲಾ ಪೊಲೀಸ್ ಮತ್ತು ಅಧಿಕಾರಿಗಳು ಭದ್ರತಾ ವ್ಯವಸ್ಥೆ ಪರಿಶೀಲನೆ ನಡೆಸುತ್ತಿದ್ದಾರೆ.


