ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 25ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಪಂಚಮಿಯ ಸಂದರ್ಭಕ್ಕೆ ಹೊಂದಿಕೊಂಡಿರುವ ಈ ಭೇಟಿ ಧಾರ್ಮಿಕವಾಗಿ ವಿಶೇಷ ಮಹತ್ವ ಹೊಂದಿದೆ.
ಈ ದಿನ ಭಗವಾನ್ ರಾಮ–ಸೀತಾ ದೇವಿಯ ವಿವಾಹ ಪಂಚಮಿ ಹಾಗೂ 17ನೇ ಶತಮಾನದಲ್ಲಿ 48 ಗಂಟೆಗಳ ಕಾಲ ಅಯೋಧ್ಯೆಯಲ್ಲಿ ಧ್ಯಾನ ಮಾಡಿದ ಒಂಬತ್ತನೇ ಸಿಖ್ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನವೂ ಆಗಿದೆ.
ಪ್ರಧಾನಿ ಮೋದಿ ಅವರು ನಾಳೆ ಬೆಳಿಗ್ಗೆ ಸುಮಾರು 10 ಗಂಟೆಗೆ ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, ದೇವಿ ಅಹಲ್ಯ, ನಿಷಾದರಾಜ್ ಗುಹಾ ಮತ್ತು ಮಾತಾ ಶಬರಿಗೆ ಸಮರ್ಪಿತವಾದ ದೇವಾಲಯಗಳನ್ನು ಹೊಂದಿರುವ ಸಪ್ತಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಅವರು ಶೇಷಾವತಾರ ಮಂದಿರ ಮತ್ತು ಮಾತಾ ಅನ್ನಪೂರ್ಣ ಮಂದಿರಗಳಿಗೆ ಭೇಟಿ ನೀಡುವ ಕಾರ್ಯಕ್ರಮವಿದೆ.


