ಬೆಂಗಳೂರು:- ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ.
ಬಿಹಾರ ಚುನಾವಣಾ ಅಖಾಡ ರಂಗೇರಿದೆ. ಸದ್ಯ ಇದೇ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಪ್ರಧಾನಿ ಮೋದಿ, ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಭಕ್ತರು ಮತ್ತು ಗಣ್ಯರು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರ ಭೇಟಿಯನ್ನು ಪ್ರಧಾನಿ ಕಚೇರಿ ದೃಢಪಡಿಸಿದೆ. ಹೀಗಾಗಿ ಸದ್ಯ ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.


