ನವದೆಹಲಿ: ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆಯಲಿದೆ. ಈಗಾಗಲೇ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿವಿಧಾನ ನಡೆಯುತ್ತಿದೆ. ತ್ರಿವರ್ಣ ಧ್ವಜದಲ್ಲಿ ಹೊದಿಸಲಾದ ಹೂವಿನ ಪೆಟ್ಟಿಗೆಯನ್ನು ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
Advertisement
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ಪುಷ್ಪಗುಚ್ಛವನ್ನು ಇರಿಸಿ ನಮನ ಸಲ್ಲಿಸಿದ್ದಾರೆ. ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭಾರತ ಮಾತ್ರವಲ್ಲದೇ ಇಡೀ ವಿಶ್ವಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.