ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಪ್ರಧಾನಿಗಳು ಭಾಗವಹಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಮಠದ ಕುರಿತು ಮಾತನಾಡುವ ನಿರೀಕ್ಷೆಯಿದೆ.
ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಈ ಭೇಟಿ ನಿಗದಿಯಾಗಿದ್ದರೂ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ.
ಪ್ರಧಾನಿಯವರ ಅಧಿಕೃತ ಪ್ರವಾಸ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಬೇಕಿದ್ದು, ಆದಿಚುಂಚನಗಿರಿ ಮಠ ಹಾಗೂ ಜಿಲ್ಲಾಡಳಿತದಿಂದ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.



