ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಅವ್ರು ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಡಿಜಿಪಿ ಎಂಎ ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ.
ಅದಲ್ಲದೆ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.









