HomeIndia Newsಕೂದಲಿನಿಂದ ಸಿಂಧೂರವನ್ನು ಅಳಿಸಲು ಬಂಧವರು ಧೂಳಾಗಿ ಹೋದರು: ಪ್ರಧಾನಿ ಮೋದಿ

ಕೂದಲಿನಿಂದ ಸಿಂಧೂರವನ್ನು ಅಳಿಸಲು ಬಂಧವರು ಧೂಳಾಗಿ ಹೋದರು: ಪ್ರಧಾನಿ ಮೋದಿ

For Dai;y Updates Join Our whatsapp Group

Spread the love

ನವದೆಹಲಿ: ಕೂದಲಿನಿಂದ ಸಿಂಧೂರವನ್ನು ಅಳಿಸಲು ಬಂಧವರು ಧೂಳಾಗಿ ಹೋದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ಬಿಕಾನೇರ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಕೂದಲಿನಿಂದ ಸಿಂಧೂರವನ್ನು ಅಳಿಸಲು ಬಂಧವರು ಧೂಳಾಗಿ ಹೋದರು ಎಂದು ಹೇಳುತ್ತಾ ಪ್ರಧಾನಿ ಮೋದಿ ಭಾರತೀಯ ಸೇನೆಯ ಶೌರ್ಯ ಮತ್ತು ಧೈರ್ಯವನ್ನು ಶ್ಲಾಘಿಸಿದರು.

ಪಾಕಿಸ್ತಾನದ ಭಯೋತ್ಪಾದನಾ ನೀತಿಯ ವಿರುದ್ಧ ನಮ್ಮ ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಲಾಗಿದೆ. ಪಾಕಿಸ್ತಾನ ಸೇನೆ ಮತ್ತು ಅದರ ಆರ್ಥಿಕತೆಯು ಪ್ರತಿಯೊಂದು ಭಯೋತ್ಪಾದಕ ದಾಳಿಗೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂಬುದನ್ನು ಆಪರೇಷನ್ಸಿಂಧೂರ ಕಾರ್ಯಾಚರಣೆಯ ಮೂಲಕ ಭಾರತ ಸ್ಪಷ್ಟಪಡಿಸಿದೆ ಎಂದು ಪ್ರಧಾನಿ ಹೇಳಿದರು.

ಭಾರತೀಯರ ರಕ್ತದೊಂದಿಗೆ ಆಟವಾಡಿದ್ದಕ್ಕಾಗಿ ಪಾಕಿಸ್ತಾನ ಭಾರೀ ಬೆಲೆ ತೆರಲೇಬೇಕು. ಭಾರತಕ್ಕೆ ನ್ಯಾಯಯುತವಾಗಿ ಸೇರಬೇಕಾದ ನೀರು ಪಾಕ್ಗೆ ಇನ್ನು ಮುಂದೆ ಸಿಗುವುದಿಲ್ಲ ಎಂದು ಹೇಳುವ ಮೂಲಕ ಸಿಂಧು ನದಿ ನೀರು ಒಪ್ಪಂದ ಅಮಾನತು ಮುಂದುವರಿಯಲಿದೆ ಎಂಬುದನ್ನು ಸೂಚ್ಯವಾಗಿ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!