ಕಾರವಾರ:– ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ಜರುಗಿದೆ.
ಎಸ್, ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಪವಾಡದ ರೀತಿ 25 ಪ್ರಯಾಣಿಕರು ಪಾರಾಗಿರುವ ಘಟನೆ ಜರುಗಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ.
ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



