ನಡುರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

0
Spread the love

ಮಂಡ್ಯ:- ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಖಾಸಗಿ ಬಸ್ ಒಂದು ಸುಟ್ಟು ಕರಕಲಾಗಿದೆ. ಚಲಿಸುತ್ತಿದ್ದ ಬಸ್‌ನ ಟೈಯರ್‌ ಬ್ಲಾಸ್ಟ್‌ ಆದ ಪರಿಣಾಮ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ 18 ಮಂದಿ ಪ್ರಯಾಣಿಕರು ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ.

Advertisement

ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಅಶೋಕ್ ಅಂಡ್ ಲಾಜೆಸ್ಟಿಕ್ ಟ್ರಾವೆಲ್ಸ್‌ಗೆ ಸೇರಿದ KA01 AL 5736 ಸಂಖ್ಯೆಯ ಬಸ್‌ ಬೆಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈಯರ್‌ ಬ್ಲಾಸ್ಟ್‌ ಆಗಿ ದುರಂತ ಸಂಭವಿಸಿದೆ.

ಟೈಯರ್‌ ಬ್ಲಾಸ್ಟ್‌ ಆಗ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್‌ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ ವ್ಯಾಪಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್‌ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.

ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here