ಹಾವೇರಿ:- ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಸಮೀಪದ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
Advertisement
ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವದಲ್ಲಿ ಅವಘಡ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದರಿಂದ ಘಟನೆ ಜರುಗಿದೆ ಎನ್ನಲಾಗಿದೆ.
ಅದೃಷ್ಟವಷಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.