ತುಮಕೂರು:- ಜಿಲ್ಲೆ ಕುಣಿಗಲ್ ತಾಲೂಕಿನ ಹೇರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Advertisement
ಬಸ್‌ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು. ಬಸ್ ಪಲ್ಟಿಯಿಂದಾಗಿ 5 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.