ಚಿಕ್ಕಮಗಳೂರು:- ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಜರುಗಿದೆ.
ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.



