ಊಟಕ್ಕೆ ಮನೆಗೆ ಕರೆದು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ: ಖಾಸಗಿ ಕಾಲೇಜು HOD ಅರೆಸ್ಟ್!

0
Spread the love

ಬೆಂಗಳೂರು: ಪ್ರತಿಷ್ಟಿತ ಖಾಸಗಿ ಕಾಲೇಜಿನ ಹೆಚ್ ಓಡಿ ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಲೀ ಬಂದಿದ್ದು, ಮನೆಗೆ ಕರೆಸಿ ಲೈಂಗಿಕ ಕಿರುಕುಳ ಕೊಟ್ಟ ಆರೋಪದ ಮೇಲೆ ತಿಲಕ್ ನಗರ ಪೊಲೀಸ್ರಿಂದ ಖಾಸಗಿ ಕಾಲೇಜಿನ ಎಚ್​ಒಡಿಯನ್ನು ಬಂಧಿಸಲಾಗಿದೆ. ಸಂಜೀವ್ ಕುಮಾರ್ ಮಂಡಲ್ ಬಂಧಿತ ಆರೋಪಿಯಾಗಿದ್ದು,

Advertisement

ಆರೋಪಿ ಸಂಜೀವ್ ಕುಮಾರ್ ಮಂಡಲ್ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿಸಿಎ) ವಿದ್ಯಾರ್ಥಿನಿಯನ್ನು ಅಕ್ಟೋಬರ್ 2 ರಂದು ತನ್ನ ಮನೆಗೆ ಕರೆಸಿಕೊಂಡಿದ್ದಾರೆ. ತನ್ನ ಕುಟುಂಬದೊಂದಿಗೆ ಜತೆಯಾಗಿ ಊಟ ಮಾಡೋಣ ಎಂದು ವಿದ್ಯಾರ್ಥಿನಿಯನ್ನು ಕರೆಸಿಕೊಂಡಿದ್ದಾರೆ. ಆದರೆ, ವಿದ್ಯಾರ್ಥಿನಿ ಅವರ ಮನೆಗೆ ತೆರಳಿದಾಗ ಮೊಂಡಲ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು. ಆ ಬಳಿಕ ಅವರು ವಿದ್ಯಾರ್ಥಿನಿಗೆ ಉಟ ನೀಡಿದ್ದಾರೆ.

ಆದರೆ, ಮೊಂಡಲ್ ಒಬ್ಬರೇ ಇದ್ದುದರಿಂದ ಇರಿಸುಮುರಿಸಿಗೆ ಒಳಗಾದ ವಿದ್ಯಾರ್ಥಿನಿ ತಾನು ಹೊರಡುವುದಾಗಿ ಹೇಳಿದ್ದಾಳೆ.ವಿದ್ಯಾರ್ಥಿನಿ ಹೊರಡಲು ಅನುವಾಗುತ್ತಿದ್ದಂತೆಯೇ ಎಚ್​​ಒಡಿ, ನಿನಗೆ ಹಾಜರಾತಿ ಕಡಿಮೆ ಇದೆ. ನನ್ನೊಂದಿಗೆ ಸಹಕರಿಸು, ಪೂರ್ಣ ಅಂಕಗಳನ್ನು ಕೊಡಿಸಲು ಸಹಾಯ ಮಾಡುತ್ತೇನೆ ಎಂದಿದ್ದಾರೆ. ಅಷ್ಟರಲ್ಲಿ ಸ್ನೇಹಿತೆಯಿಂದ ಫೋನ್ ಕರೆ ಬಂದಿದ್ದು, ತುರ್ತಾಗಿ ಹೋಗಬೇಕಿದೆ ಎಂದು ಎಚ್​ಒಡಿ ಮನೆಯಿಂದ ಹೇಗೋ ತಪ್ಪಿಸಿಕೊಂಡು ಬಂದೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎಚ್​ಒಡಿ ಮನೆಯಿಂದ ತನ್ನ ಮನೆಗೆ ತೆರಳಿದ ವಿದ್ಯಾರ್ಥಿನಿ ಪೋಷಕರಿಗೆ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಅವರು ಕಾಲೇಜು ಆಡಳಿತ ಮಂಡಳಿಯನ್ನು ಸಂಪರ್ಕಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ, ವಿದ್ಯಾರ್ಥಿನಿಯ ದೂರಿನ ಮೇರೆಗೆ ತಿಲಕ್‌ನಗರ ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here