ಬೆಂಗಳೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು ಕಳೆದ ಒಂದು ವರ್ಷದಲ್ಲಿ 322 ನವಜಾತ ಶಿಶುಗಳ ಸಾವಿಗೀಡಾಗಿವೆ ಎಂಬ ಸುದ್ದಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೇ ಮತೋರ್ವ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಹೌದು ನಾಗರಭಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಅನುಷಾ ಎಂಬುವವರು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ತಾಯಿಯ ಮರಣಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.