ಬಳ್ಳಾರಿ: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ವಿವಾದ ದಿನದಿಂದ ದಿನದಕ್ಕೆ ತಾರಕಕ್ಕೇರಿತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಬೆದರಿಕೆಯಿಂದ ಡೆತ್ನೋಟ್ ಹರಿಬಿಟ್ಟು, ಸಚಿನ್ ರೈಲಿಗೆ ತಲೆಕೊಟ್ಟಿದ್ದ.. ಗುತ್ತಿಗೆದಾರನ ಆತ್ಮಹತ್ಯೆ ಹಿಂದೆ ಸಚಿವರ ಹೆಸರು ಕೇಳಿ ಬರ್ತಿದ್ದಂತೆ, ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದೆ.
ಇದೀಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕಿತ್ತು, ಇಲ್ಲದಿದ್ದರೆ ಸಿಎಂ ಆದ್ರೂ ರಾಜೀನಾಮೆ ಪಡೆದುಕೊಳ್ಳಬೇಕಿತ್ತು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ತಂದೆ ಎಐಸಿಸಿ ಅಧ್ಯಕ್ಷರಿದ್ದಾರೆ ಅನ್ನೋ ಸೊಕ್ಕು, ದುರಹಂಕಾರ ಇದೆ.
ಮಲ್ಲಿಕಾರ್ಜುನ ಖರ್ಗೆಯವರು ಮನಸ್ಸು ಮಾಡಿದ್ದರೆ ಸಿಎಂ ಸ್ಥಾನವನ್ನು ಕಿತ್ತುಕೊಳ್ಳಬಹುದು ಎನ್ನುವ ಧೈರ್ಯ ಪ್ರಿಯಾಂಕ್ ಖರ್ಗೆಗೆ ಇದೆ. ಹೀಗಾಗಿ ಬಿಜೆಪಿಯವರು ಬಟ್ಟೆ ಹರಿದುಕೊಂಡ್ರೂ ತಾನು ರಾಜೀನಾಮೆ ನೀಡಲ್ಲ ಎಂದು ಸೊಕ್ಕಿನ ಮಾತುಗಳನ್ನಾಡಿದ್ದಾರೆ ಎಂದು ಹೇಳಿದ್ದಾರೆ.