ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಮತ್ತೆ ಟಾಲಿವುಡ್ ಗೆ ಮರಳಿದ್ದಾರೆ. ಮದುವೆಯಾದ ಬಳಿಕ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಟಿ ಇದೀಗ ಮತ್ತೆ ದಕ್ಷಿಣ ಭಾರತದ ಸಿನಿಮಾಗೆ ಮರಳಿದ್ದಾರೆ. ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ 30 ಕೋಟಿ ರೂ. ಸಂಭಾವನೆಗೆ ಪಡೆದಿದ್ದು ಈ ಮೂಲಕ ಸ್ಟಾರ್ ನಟಿಯರಾದ ಆಲಿಯಾ ಭಟ್, ಕರೀನಾ ಕಪೂರ್, ದೀಪಿಕಾ ಪಡುಕೋಣೆ, ನಯನತಾರಾರನ್ನೇ ಹಿಂದಿಕ್ಕಿದ್ದಾರೆ.
ಆಲಿಯಾ ಭಟ್, ದೀಪಿಕಾ ಪಡುಕೋಣೆ ಪಡುಕೋಣೆ, ಕಿಯಾರಾ ಅಡ್ವಾಣಿ ಸೇರಿದಂತೆ ಇನ್ನೂ ಕೆಲ ಸ್ಟಾರ್ ನಟಿಯರು ಸಿನಿಮಾವೊಂದಕ್ಕೆ 5ರಿಂದ 15 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿರುವಾಗ 30 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಪ್ರಿಯಾಂಕ ಚೋಪ್ರಾ ಈ ನಟಿಯರನ್ನೇ ಹಿಂದಿಕ್ಕಿದ್ದಾರೆ. ಮಹೇಶ್ ಬಾಬು ನಟನೆಯ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕ 30 ಕೋಟಿ ರೂ. ಸಂಭಾವನೆ ಪಡೆದಿದ್ದು ಇಷ್ಟು ಸಂಭಾವನೆ ಪಡೆದ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಿಗ್ಗಿ ಪಾತ್ರರಾಗಿದ್ದಾರೆ.
ಮಹೇಶ್ ಬಾಬು ನಟನೆಯ 29ನೇ ಚಿತ್ರದಲ್ಲಿ ನಟಿಸಲು ಪ್ರಿಯಾಂಕಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದಷ್ಟೇ ಅಲ್ಲ, ಒಡಿಶಾ, ವಿಶಾಖಪಟ್ಟಣಂ, ಹೈದರಾಬಾದ್‌ನಲ್ಲಿ ಈಗಾಗಲೇ ಶೂಟಿಂಗ್ ನಡೆಯುತ್ತಿದ್ದು, ನಟಿ ಕೂಡ ಭಾಗಿಯಾಗಿದ್ದಾರೆ. ಈ ಸಿನಿಮಾವನ್ನು ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ.