ಪ್ರಿಯಾಂಕಾ ಗಾಂಧಿಯವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸಮಸ್ತ ಭಾರತದ ಎರಡು ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕೇಂದ್ರ ನಿರ್ಧಾರ ತೆಗೆದುಕೊಳ್ಳುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕೌಟುಂಬಿಕ ಹಿನ್ನೆಲೆ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೇಶ ಕಂಡ ಮರೆಯದ ಮಾಣಿಕ್ಯ ಇಂದಿರಾ ಗಾಂಧಿಯವರ ಮೊಮ್ಮಗಳು. ರಾಜಕೀಯವಾಗಿ ಪ್ರಬಲವಾದ ನೆಹರು-ಗಾಂಧಿ ಕುಟುಂಬದ ಕುಡಿಯಾಗಿದ್ದು, ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ‍್ಯ ಪಡೆಯುವ ಮೊದಲು ದಶಕಗಳಿಂದ ಭಾರತೀಯ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದೆ. ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಪುತ್ರಿ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಸಹೋದರಿಯಾಗಿದ್ದಾರೆ.
ರಾಜಕೀಯ ಜೀವನ: ಪ್ರಿಯಾಂಕಾ ಗಾಂಧಿಯವರು ತಮ್ಮ ರಾಜಕೀಯ ವೃತ್ತಿ ಜೀವನದ ಮೊದಲ ವರ್ಷಗಳಲ್ಲಿ, ಗಾಂಧಿ ವಾದ್ರಾ ಅವರು ಸಕ್ರಿಯ ರಾಜಕೀಯಕ್ಕೆ ಸೇರುವ ಅಭಿಲಾಷೆಯನ್ನು ಹೊಂದಿದವರಲ್ಲ.
ಆದರೆ ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿಯವರ ತಾಯಿ ಸೋನಿಯಾ ಮತ್ತು ಅಮೇಥಿಯಲ್ಲಿ ಅವರ ಸಹೋದರ ರಾಹುಲ್ ಅವರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ನೆರವಾದರು.
2004ರ ಭಾರತೀಯ ಸಾರ್ವತ್ರಿಕ ಚುನಾವಣೆಯ ಪಕ್ಷದ ಪ್ರಚಾರದ ಸಮಯದಲ್ಲಿ ಅವರು ರಾಜಕೀಯಕ್ಕೆ ಮೊಟ್ಟ ಮೊದಲ ದೃಢ ಹೆಜ್ಜೆಯನ್ನು ಇಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಅಲ್ಲಿ ಅವರು ಹಲವಾರು ಕ್ಷೇತ್ರಗಳಲ್ಲಿ ರಾಜಕೀಯ ರ‍್ಯಾಲಿಗಳನ್ನು ನಡೆಸಿದರು ಮತ್ತು ಉತ್ತರ ಪ್ರದೇಶದ ರಾಜಕೀಯ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಮುನ್ನುಗ್ಗಿದರು.
ಜನವರಿ 23, 2019ರಂದು ಉತ್ತರ ಪ್ರದೇಶದ ಪೂರ್ವ ಭಾಗದ ಉಸ್ತುವಾರಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಾಗ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಔಪಚಾರಿಕವಾಗಿ ಸಕ್ರಿಯ ರಾಜಕೀಯವನ್ನು ಪ್ರವೇಶಿಸಿದರು. ಅವರನ್ನು ಸೆಪ್ಟೆಂಬರ್ 11, 2020ರಂದು ಇಡೀ ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು.
2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಕಾಂಗ್ರೆಸ್ ನಿರ್ಣಾಯಕ ಹೋರಾಟದಲ್ಲಿ ಭಾಗವಹಿಸಿದ್ದರು. ಅವರು 23 ಅಕ್ಟೋಬರ್ 2021ರಂದು ಬಾರಾಬಂಕಿಯಿಂದ ಪಕ್ಷದ ಪ್ರಚಾರವನ್ನು ಪ್ರಾರಂಭಿಸಿದರು. ಅವರು ಇಲ್ಲಿಯವರೆಗಿನ ಪ್ರಚಾರದ ಏಕೈಕ ಮುಖವಾಗಿದ್ದಾರೆ ಮತ್ತು ಉತ್ತರ ಪ್ರದೇಶ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವ ಸಾಧ್ಯತೆಯಿದೆ. ಕಾಂಗ್ರೆಸ್ ಪಕ್ಷದ ಒಂದು ವಿಭಾಗವು ಪ್ರಿಯಾಂಕಾ ಗಾಂಧಿ ವಾದ್ರಾರವರು ತಮ್ಮ ಅಜ್ಜಿ, ಭಾರತ ಕಂಡ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿಯವರು ಕಂಡಂತೆ ಆಭೂತಪೂರ್ವ ಪಕ್ಷ ಸಂಘಟನೆಯಲ್ಲಿ ಒಂದು ದಿನ ಪಕ್ಷವನ್ನು ಮುನ್ನಡೆಸಬೇಕೆಂದು ಸಮಸ್ತ ದೇಶದ ಕಾಂಗ್ರೆಸ್ ಪಕ್ಷದ ಅಭಿಮಾನಿಗಳ ಜನಾಭಿಪ್ರಾಯವಾಗಿದೆ.
ಆರಂಭಿಕ ಜೀವನ ಮತ್ತು ಶಿಕ್ಷಣ: ಗಾಂಧಿ ವಾದ್ರಾ ಅವರು ಜನವರಿ 12, 1932ರಂದು ಜನಿಸಿದರು. ಅವರು ತಮ್ಮ ಶಾಲಾ ಶಿಕ್ಷಣವನ್ನು ನವದೆಹಲಿಯ ಮಾಡರ್ನ್ ಸ್ಕೂಲ್ ಮತ್ತು ಕಾನ್ವೆಂಟ್ ಆಫ್ ಜೀಸಸ್ ಮತ್ತು ಮೇರಿಯಲ್ಲಿ ಮಾಡಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಮನೋ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ ಮತ್ತು ಬೌದ್ಧ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ವೈಯಕ್ತಿಕ ಜೀವನ: ಗಾಂಧಿ ವಾದ್ರಾ ಅವರು ರಿಯಲ್ ಎಸ್ಟೇಟ್ ಡೆವಲಪರ್ ಡಿಎಲ್‌ಎಫ್‌ನೊಂದಿಗೆ ಭೂ ವ್ಯವಹಾರಗಳಲ್ಲಿ ತೊಡಗಿದ ಹೊಸ ದೆಹಲಿ ಮೂಲದ ಉದ್ಯಮಿ ರಾಬರ್ಟ್ ವಾದ್ರಾ ಅವರನ್ನು ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ-ಒಬ್ಬ ಮಗ ಮತ್ತು ಮಗಳು. ಗಾಂಧಿ ವಾದ್ರಾ ಅವರು ಬೌದ್ಧ ತತ್ವಶಾಸ್ತçದ ಕಟ್ಟಾ ಅನುಯಾಯಿಯಾಗಿದ್ದಾರೆ.
ಮಹಿಳೆಯರ ಮನಗೆದ್ದ ಪ್ರಿಯಾಂಕಾ ಗಾಂಧಿ: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ನಾಗರಿಕರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ನೈತಿಕ ಶ್ರೇಯೋಭಿವೃದ್ಧಿಗಾಗಿ, ಮಹಿಳಾ ಸಬಲಿಕರಣದ ಸದುದ್ದೇಶದೊಂದಿಗೆ ರಾಜ್ಯದ ನಾಗರಿಕರ ಪಂಚ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡುವಂತೆ ಮಹತ್ವದ ಹೆಜ್ಜೆಯನ್ನಿಟ್ಟು ಮಹಿಳೆಯರ, ಯುವಕರ ಮನ ಗೆದ್ದಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ಮಾಶಾಸನದಂತಹ ಮಹತ್ವಪೂರ್ಣ ಜನಸ್ಪಂದನೆಯ ಯೋಜನೆಯ ರೂವಾರಿಯಾಗಿದ್ದಾರೆ.
– ಸಹನಾ ರಾಘವೇಂದ್ರ ಪಾಲನಕರ.
ಅಧ್ಯಕ್ಷರು, ಸೌಜನ್ಯತಾ ಸಮಗ್ರ ನಾಗರಿಕ ಹಿತರಕ್ಷಣಾ ಸಮಿತಿ.