ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಯೋಜನೆಯ ಮಹಿಳಾ ಒಕ್ಕೂಟದ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಪುರಸ್ಕಾರದೊಂದಿಗೆ 1 ಲಕ್ಷ ರೂ ಬಹುಮಾನ ಪಡೆದುಕೊಂಡಿದೆ.
ಇತ್ತೀಚೆಗೆ ಗದಗ ಜಿಲ್ಲಾಡಳಿತ ಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಗದಗ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು 1 ಲಕ್ಷ ರೂಗಳ ಚೆಕ್, ಬಹುಮಾನದೊಂದಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.



