ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡದ ಐಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್. ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ.
ಇವರು 2023 ರಲ್ಲಿ ಭಾರತದ ರಾಷ್ಟçಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಈ ಹಿಂದೆ ಅವರು ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EECE) ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ (Faculty Welfare) ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿದ್ದರು. ಅವರು 2004ರಲ್ಲಿ ಐಐಟಿ ಮದ್ರಾಸ್‌ನಿಂದ ಪಿಎಚ್‌ಡಿ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



