ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧ್ಯಕ್ಷತೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‌ಸಿಪಿ/ಟಿಎಸ್‌ಪಿ) ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೋಟೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Advertisement