ಚಿತ್ರದುರ್ಗ:- ಪ್ರಾಧ್ಯಾಪಕರ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಲಿಖಿತಾ(23) ಮೃತ ವಿದ್ಯಾರ್ಥಿನಿ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲಿಖಿತಾ ಆತ್ಮಹತ್ಯೆಗೂ ಮುನ್ನ ತಾನು ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



