• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

50 ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸ್ವೀಕಾರ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ -ಸಚಿವ ಬಿ.ಎಸ್.ಸುರೇಶ್

Vijaya Sakshi News Desk by Vijaya Sakshi News Desk
December 13, 2024
in Karnataka News
0
50 ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸ್ವೀಕಾರ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ -ಸಚಿವ ಬಿ.ಎಸ್.ಸುರೇಶ್
0
SHARES
0
VIEWS
Share on FacebookShare on Twitter

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.

ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು. 20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ
ಕುಮುಟ ಕ್ಷೇತ್ರದ ಶಾಸಕ ದಿನಕರ್ ಕೇಶವ್ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕ್ಷೇತ್ರವಾದ ಗೋಕರ್ಣ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಅಥವಾ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವಂತೆ ಕೋರಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರಲ್ಲಿ ಕೋರಿದರು.ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರುಗಳಾದ ವಿಜಯೇಂದ್ರ,

ಡಾ.ಅಶ್ವತ್ ನಾರಾಯಣ, ಸುನೀಲ್ ಕುಮಾರ್, ಭೈರತಿ ಬಸವರಾಜ್ ಅವರು ಗೋಕರ್ಣ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು. ಲಕ್ಷಾಂತರ ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಆದ್ದರಿಂದ ಸರ್ಕಾರ ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 2011 ರ ಜನಗಣತಿಯಂತೆ ಗೋಕರ್ಣದಲ್ಲಿ 13,539 ಜನಸಂಖ್ಯೆ ಇದೆ. ವಿಸ್ತೀರ್ಣ 33.1 ಚದರ ಕಿ.ಮೀ. ಇದ್ದು, ಜನಸಾಂದ್ರತೆ ಪ್ರತೀ ಚದರ ಕಿ.ಮೀ.ಗೆ 409 ಇದೆ. 2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ 2011ರ ಜನಗಣತಿಯಲ್ಲಿ 15,000ಕ್ಕಿಂತ ಹೆಚ್ಚು ಜನಸಂಖ್ಯೆ

ಇರುವ ಪಂಚಾಯಿತಿಗಳನ್ನು ಮಾತ್ರ ಮೇಲ್ದರ್ಜೆಗೆ ಏರಿಸಲು ಪರಿಗಣಿಸಲು ನಿರ್ಧರಿಸಲಾಗಿದೆ. ಆದಾಗ್ಯೂ ಗೋಕರ್ಣದ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಶಾಸಕರು, ಅಧಿಕಾರಿಗಳೊಂದಗೆ ಸಭೆ ನಡೆಸಿ ಸಕಾರಾತ್ಮವಾಗಿ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು. ಇದೇ ವೇಳೆ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಹಾಗೂ ಕಮಲ್‌ನಗರವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ರಹೀಂ ಖಾನ್ ಅವರಲ್ಲಿ ಮನವಿ ಮಾಡಿದರು.

Tags: belagavi sessionbyrathi sureshkannadanewsKarnatakaVijayasakshivijayasakshinews
Previous Post

ನಟ ಅಲ್ಲು ಅರ್ಜುನ್ ಬಂಧನದಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ರೇವಂತ್ ರೆಡ್ಡಿ ಸ್ಪಷ್ಟನೆ

Next Post

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ನಟ ಅಲ್ಲು ಅರ್ಜುನ್ʼಗೆ 14 ದಿನ ನ್ಯಾಯಾಂಗ ಬಂಧನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ನಟ ಅಲ್ಲು ಅರ್ಜುನ್ʼಗೆ 14 ದಿನ ನ್ಯಾಯಾಂಗ ಬಂಧನ

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ನಟ ಅಲ್ಲು ಅರ್ಜುನ್ʼಗೆ 14 ದಿನ ನ್ಯಾಯಾಂಗ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link