ವೇಶ್ಯಾವಾಟಿಕೆ ದಂಧೆ: ಓರ್ವ ಪುರುಷ, ಇಬ್ಬರು ಮಹಿಳೆಯರು ಅರೆಸ್ಟ್!

0
Spread the love

ಬೆಳಗಾವಿ:- ಇಲ್ಲಿನ ತಿಳಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ.

Advertisement

ಆರೋಪಿಗಳು, ಬೆಳಗಾವಿಯ ಹಿಂದವಾಡಿ ಹನುಮಾನ್‌ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here