ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಖಾಸಗಿ ಶಿಕ್ಷಣ ಸಂಸ್ಥೆಗಳು ಇಲ್ಲಸಲ್ಲದ ಕಾರಣಗಳನ್ನು ಹೇಳಿ ವಿದ್ಯಾರ್ಥಿಗಳಿಂದ ಶುಲ್ಕದ ನೆಪದಲ್ಲಿ ಭಾರೀ ಪ್ರಮಾಣದ ಹಣ ಪಡೆಯುತ್ತಿದ್ದು, ಈ ಕೂಡಲೇ ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಗುರುವಾರ ರೋಣ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಸೂಡಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮುಲ್ಲಾನ ಭಾವಿ, ಪೋತರಾಜನ ಕಟ್ಟೆ ಮೂಲಕ ತಹಸೀಲ್ದಾರ ಕಚೇರಿ ತಲುಪಿತು. ಈ ಸಂಧರ್ಭದಲ್ಲಿ ಮೂರು ವೃತ್ತಗಳಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರ ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಪಾಲಕರಿಂದ ವಿವಿಧ ರೀತಿಯ ಶೈಕ್ಷಣಿಕ ಚಟುವಟಿಕೆಗಳ ಹಣ ಪಾವತಿಸಬೇಕು ಎಂದು ಒತ್ತಡ ಹಾಕಿ ಹಣ ದೋಚುತ್ತಿದ್ದಾರೆ. ಈ ಎಲ್ಲ ವಿಷಯಗಳು ಅಧಿಕಾರಿಗಳಿಗೆ ತಿಳಿದಿದ್ದರೂ ಸಹ ಮೌನವಾಗಿರುವುದು ನಾಚಿಕೆ ತರುವ ಸಂಗತಿಯಾಗಿದೆ. ಈ ಕೂಡಲೇ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪಡೆಯುವ ಶಾಲಾ ಫೀ ಬಗ್ಗೆ ನಾಮಫಲಕ ಹಾಕುವಂತೆ ಸೂಚಿಸಬೇಕು ಎಂದು ಆಗ್ರಹಿಸಿದರು.

ಪರಿಷತ್‌ನ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here