ಆಶಾ ಕಾರ್ಯಕರ್ತೆಯರ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮತ್ತು ಜಿಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಆಶಾ ಕುಂದುಕೊರತೆ ಸಭೆ ಕರೆಯುವಂತೆ ಒತ್ತಾಯಿಸಿದರು.

Advertisement

ಗದಗ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ RCHO ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ಸುರೇಶ್.ಉ, ಜಿಲ್ಲಾ ಅಧ್ಯಕ್ಷರಾದ ಭಾಗ್ಯಜ್ಯೋತಿ ಹಡಪದ, ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀ ಪೂಜಾರ್, ಜಿಲ್ಲಾ ಉಪಾಧ್ಯಕ್ಷರಾದ ಸುಂದರಮ್ಮ ಪಾಟೀಲ್, ಪ್ರೇಮ ಪಾಟೀಲ್, ಶೋಭಾ ಮಲ್ಲನಗೌಡ, ಪ್ರಭಾವತಿ, ಅನ್ನಪೂರ್ಣ ಕಟವಾ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here