HomeBelgaumಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ನಾಳೆ BJP ಕಾರ್ಯಕರ್ತರಿಂದ ಪ್ರತಿಭಟನೆ

ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ನಾಳೆ BJP ಕಾರ್ಯಕರ್ತರಿಂದ ಪ್ರತಿಭಟನೆ

For Dai;y Updates Join Our whatsapp Group

Spread the love

ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಳೆದ ವಾರ ಬೆಳಗಾವಿ ಗ್ರಾಮಾಂತರ ವಂಟಮೂರಿ ವಿಷಯ ದೇಶಾದ್ಯಂತ ಚರ್ಚೆ ಆಗಿದೆ. ಒಬ್ಬ ಮಹಿಳೆಯನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲೇ ಘಟನೆ ನಡೆದಿದೆ ಎಂದರು

ನಾನು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಬಂದಿದ್ದೇನೆ. ಗೃಹ ಮಂತ್ರಿಗಳು ಭೇಟಿ ನೀಡಿದ್ದಾರೆ. ಆದರೆ ಇಡೀ ರಾಜ್ಯದ ಜನ ತಲೆ ತಗ್ಗಿಸುವ ಘಟನೆ ಇದಾಗಿದೆ. ಈ ಸಂಬಂಧ ಆರು ಮಂದಿಯ ಬಂಧನವೂ ಆಗಿದೆ. ಆದರೆ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!