HomeGadag Newsನಾಳೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ನಾಳೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಆಗಸ್ಟ್ 19ರಂದು ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದೆ.

ತದನಂತರ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿ.ಪಂ, ತಾ.ಪಂ, ಗ್ರಾ.ಪಂ, ನಗರಸಭೆ, ಪ.ಪಂ, ಪುರಸಭೆ, ಎಪಿಎಂಸಿ ಪಕ್ಷದ ಅಧ್ಯಕ್ಷರು-ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಪದಾಧಿಕಾರಿಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರೂ ಆಗಿರುವ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಪ್ರತಿಭಟನೆಯ ನೇತೃತ್ವ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!