ವಿಜಯಸಾಕ್ಷಿ ಸುದ್ದಿ, ಗದಗ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಏರಿಕೆ ಖಂಡಿಸಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಜೂನ್ 20ರ ಮಧ್ಯಾಹ್ನ 12 ಗಂಟೆಗೆ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
Advertisement
ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ, ಗದಗ ಉಸ್ತುವಾರಿ ಆಲ್ಕೋಡ್ ಹನುಮಂತಪ್ಪ, ಗದಗ ಜಿಲ್ಲಾಧ್ಯಕ್ಷ ಎಂ.ವೈ. ಮುಧೋಳ ಇವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಗದಗ ಜಿಲ್ಲೆಯ ರಾಜ್ಯ ಮುಖಂಡರು, ಜಿಲ್ಲಾ ಪದಾಧಿಕಾರಿಗಳು ತಾಲೂಕಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಜೆಡಿಎಸ್ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಎಚ್.ಕೊಪ್ಪಳ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿದ್ದಾರೆ.