ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್‌ನ ನೂರಾರು ನಿವಾಸಿಗಳು ಬದು ನಿರ್ಮಾಣ ಕೆಲಸ ಮುಗಿಸಿ ಖಾಲಿ ಕೊಡ ಹಿಡಿದು ಗ್ರಾ.ಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕುಬೇರಪ್ಪ ಕೊಡಗಾನೂರ ಮಾತನಾಡಿ, ನಮ್ಮ ವಾರ್ಡಿನಲ್ಲಿ ಕಳೆದ ಆರು ತಿಂಗಳಿಂದ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುತ್ತಾ ಇದ್ದೇವೆ. ಈ ಬಗ್ಗೆ ಹಲವಾರು ಬಾರಿ ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ತಕ್ಷಣವೇ ನಮಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಪಂಚಾಯಿತಿಗೆ ಆಗಮಿಸುತ್ತಿದ್ದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಸ್.ಎಸ್. ರಿತ್ತಿ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ನಿವಾಸಿಗಳ ಸಮಸ್ಯೆಯನ್ನು ಆಲಿಸಿದ ಪಿಡಿಓ, ನಿಮಗಾದ ತೊಂದರೆಯನ್ನು ವಾರ್ಡಿನ ಸದಸ್ಯರೊಂದಿಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿತ್ತೇನೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬಸವ್ವ ಕೊಡಗಾನೂರ, ಸಜನಾ ಜಕ್ಕಲಿ, ಯಲ್ಲಮ್ಮ ಡಂಬಳ, ಮಮ್ಮಸಾಬ ಬಾಲೇಸಾಬನವರ, ಮಾಬಮ್ಮ ಕಳಕಾಪೂರ, ಮಮತಮ್ಮ ಬಾಲೇಸಾಬನವರ, ಖಾಶಿಂಬಿ ಜಾಲಿಹಾಳ, ದಾವಲಮ್ಮ ಗಡಾದ, ಮಮ್ಮಸಲೀಂ ಜಕ್ಕಲಿ, ಉಮೇಶ ಕೊಡಗಾನೂರ, ಇಸ್ಮಾಯಿಲ್ ಗಡಾದ, ಹನುಮಂತ ಕೊಡಗಾನೂರ, ಮೌಲುಸಾಬ ನದಾಫ್, ಆನಂದ ಬಾರಕೇರ, ಯಲ್ಲಪ್ಪ ಮುಕ್ಕಣ್ಣವರ, ಯಮನೂರ ಮಾದರ, ಯಲ್ಲಪ್ಪ ಬಾರಕೇರ, ರಾಜಾಸಾಬ್ ನಮಾಜಿ, ಬಾಬುಸಾಬ ಯಲಬುರ್ಗಿ ಮುಂತಾದವರಿದ್ದರು.