ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಅಖಿಲ ಭಾರತ ಜಂಗಮ ಸೇವಾ ಸಮಿತಿ, ವೀರಶೈವ ಮಹಾಸಭಾ, ಪ್ರಜಾ ಪರಿವರ್ತನಾ ವೇದಿಕೆ, ಕ್ರಾಂತಿ ಸೇನೆ, ವೀರ ಮದಕರಿ ಸೇನೆ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘಟನೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಹತ್ಯೆಗೈದ ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಶನಿವಾರ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮುನ್ನ ನಗರದ ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆತಡೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ಕೊರ್ಲಹಳ್ಳಿ, ಯಾವುದೇ ಸಮಾಜದ ಹೆಣ್ಣುಮಕ್ಕಳಿಗೂ ಈ ರೀತಿ ಅನ್ಯಾಯವಾಗಬಾರದು ಎಂದರು. ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಬಾಬು ಬಾಕಳೆ, ಜಂಗಮ ಸಮಾಜದ ಮುಖಂಡ ವಿ.ಕೆ. ಗುರುಮಠ, ನಿವೃತ್ತ ಯೋಧ ರಾಜು ಹುಲಕೋಟಿ ಮುಂತಾದವರು ಮಾತನಾಡಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಜಂಗಮ ಸೇವಾ ಸಮಿತಿ ಅಧ್ಯಕ್ಷ ಪ್ರಭಯ್ಯ ದಂಡಾವತಿಮಠ, ಕ್ರಾಂತಿಸೇನೆಯ ಮಹಿಳಾಧ್ಯಕ್ಷೆ ರಾಣಿ ಚಂದಾವರಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಲಿಂಗಪ್ಪ, ವಿ.ಬಿ. ಹಿರೇಮಠ ಮೇಮೊರಿಯಲ್ ಟ್ರಸ್ಟ್ನ ವಿ.ವಿ. ಹಿರೇಮಠ, ಸಂಗಮ್ಮ ಹಿರೇಮಠ, ವಿಜಯಕುಮಾರ ಹಿರೇಮಠ, ಮುರುಗೇಶ ಬಡ್ನಿ, ಸಂಗಮೇಶ ಮೆಣಸಿನಕಾಯಿ, ಬಸವರಾಜ ಬ್ಯಾಹಟ್ಟಿ, ಡಾ. ಜಿ.ಎಸ್. ಹಿರೇಮಠ, ಸಂತೋಷ, ಶಿವಕುಮಾರ, ಉಮಾಪತಿ ಭೂಸನೂರಮಠ, ಬಸಯ್ಯ ನಂದಿಲಕೋಲಮಠ ಶ್ರೀಧರ ಜವಳಿ, ಆರ್.ಎಂ. ಹಿರೇಮಠ, ಪ್ರವೀಣ ಹಬೀಬ ಮುಂತಾದವರು ಉಪಸ್ಥಿತರಿದ್ದರು.