ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಲಂ ಸಮಿತಿಯಿಂದ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಸಂಸತ್ತಿನ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿದ್ದು, ಕೊಡಲೇ ಸಂವಿಧಾನ ವಿರೋಧಿ ಅಮಿತ್ ಶಾರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಗಾಂಧಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಿದರು.

Advertisement

ದಲಿತ ಸಂಘರ್ಸ ಸಮಿತಿ ಜಿಲ್ಲಾ ಸಂಚಾಲಕ ವೆಂಕಟೇಶಯ್ಯ ಮಾತನಾಡಿ, ಅಂಬೇಡ್ಕರ್ ಅವರು ಹಲವು ಧರ್ಮ, ಭಾಷೆ, ಸಂಸ್ಕೃತಿ-ಸAಪ್ರದಾಯಗಳನ್ನು ಒಳಗೊಂಡಿರುವ ಭಾರತದಂತಹ ದೇಶವನ್ನು ಸಂವಿಧಾನದ ಮೂಲಕ ವಿವಿಧತೆಯಲ್ಲಿ ಏಕತೆ ಮೂಡಿಸಿ ಸರ್ವ ಭಾರತೀಯರನ್ನು ಒಂದುಗೂಡಿಸಿದವರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು, ಕೂಡಲೇ ರಾಷ್ಟ್ರ ಪತಿಗಳು ಇಂತಹ ಸಂವಿಧಾನ ವಿರೋಧಿಗಳನ್ನು ಸಂಪುಟದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕರಾದ ಬಸವರಾಜ ಪೂಜಾರ, ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಡಂಬಳ, ದುರ್ಗಪ್ಪ ಮಣ್ಣವಡರ, ಖಾಜಾಸಾಬ ಇಸ್ಮಾಯಿಲನವರ, ಮುನ್ನಾ ಅಗಡಿ, ಖಾಜಾಸಾಬ ಬಳ್ಳಾರಿ, ಶಂಕ್ರಪ್ಪ ಪೂಜಾರ, ಜಂದಿಸಾಬ ಬಳ್ಳಾರಿ, ಮಕ್ತುಮಸಾಬ ಮುಲ್ಲಾನವರ, ಸಾಕ್ರುಬಾಯಿ ಗೋಸಾವಿ, ದಾದು ಗೋಸಾವಿ ಮುಂತಾದವರಿದ್ದರು.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಅಸಮಾನತೆಯನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು. ಅಂತಹ ಮಹಾನ್ ನಾಯಕನ ಬಗ್ಗೆ ಮಾತನಾಡುವ ಮೂಲಕ ಅಮಿತ್ ಶಾ ಈ ದೇಶಕ್ಕೆ ಮತ್ತು ನಮ್ಮ ದೇಶದ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಕೂಡಲೇ ಅವರನ್ನು ಕೇಂದ್ರ ಸಚಿವ ಸಂಪುಟದಿAದ ಕೈಬಿಡಬೇಕು ಎಂದರು ಆಗ್ರಹಿಸಿದರು.

 


Spread the love

LEAVE A REPLY

Please enter your comment!
Please enter your name here