HomeIndia Newsಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: 4 ಕಿ.ಮೀ. ವ್ಯಾಪ್ತಿಯಲ್ಲಿ ಇಂಟರ್ನೆಟ್ ಬಂದ್

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: 4 ಕಿ.ಮೀ. ವ್ಯಾಪ್ತಿಯಲ್ಲಿ ಇಂಟರ್ನೆಟ್ ಬಂದ್

For Dai;y Updates Join Our whatsapp Group

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ.

ಗೃಹ ಸಚಿವಾಲಯದ ಅನುಮೋದನೆಯೊಂದಿಗೆ ಹೊರಡಿಸಲಾದ ಆದೇಶದ ಪ್ರಕಾರ, ಅಕ್ಟೋಬರ್ 9ರ ರಾತ್ರಿ 10 ಗಂಟೆಯಿಂದ ಅಕ್ಟೋಬರ್ 10ರ ರಾತ್ರಿ 10 ಗಂಟೆಯವರೆಗೆ ನವದೆಹಲಿಯ ಜನಪಥ್–ಕರ್ತವ್ಯ ಪಥ್ ಕ್ರಾಸಿಂಗ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವರದಿಯಾಗಿದೆ.

ಈ ಆದೇಶವನ್ನು ಜಾರಿಗೆ ತರುವಂತೆ ದೆಹಲಿ ಪೊಲೀಸರು ಏರ್‌ಟೆಲ್, ವೊಡಾಫೋನ್ ಐಡಿಯಾ (ವಿಐ), ಜಿಯೋ ಹಾಗೂ ಎಂಟಿಎನ್‌ಎಲ್ ಟೆಲಿಕಾಂ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ:

ಅಕ್ಟೋಬರ್ 10ರಂದು ಸಿಜೆಪಿ ಸೇರಿದಂತೆ ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ನೀಡಿದ್ದವು. ಆದರೆ, ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ.

ಈ ಕುರಿತು ಮಾತನಾಡಿದ ನವದೆಹಲಿ ವ್ಯಾಪ್ತಿಯ ಜಂಟಿ ಪೊಲೀಸ್ ಆಯುಕ್ತೆ ನೂಪುರ್ ಪ್ರಸಾದ್, ಪ್ರತಿಭಟನೆಗೆ ಅನುಮತಿ ಕೋರಿ ತಡವಾಗಿ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೆ, ಸಿಜೆಪಿ ಈ ಹಿಂದೆ ನಡೆಸಿದ್ದ ಪ್ರತಿಭಟನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದ್ದನ್ನು ಪರಿಗಣಿಸಿ ಈ ಬಾರಿ ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಣೆ ಮತ್ತು ಇಂಟರ್ನೆಟ್ ಸ್ಥಗಿತದ ಆದೇಶದ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯಲ್ಲಿ ಭದ್ರತಾ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ವರದಿಯಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img