ಆನೇಕಲ್:- ಬಾಂಗ್ಲಾ ದೇಶದಲ್ಲಿ ಹಿಂದುಗಳ ಹತ್ಯೆ ಖಂಡಿಸಿ ಹಿoದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಚಂದಾಪುರದಿಂದ ಸೂರ್ಯ ಸಿಟಿ ವರೆಗೂ ಹಿoದು ಸಂಘಟನೆಗಳು ರ್ಯಾಲಿ ಮಾಡಿದ್ದಾರೆ.
ರಸ್ತೆ ಉದ್ದಕ್ಕೂ ಘೋಷಣೆ ಕೂಗಿ ಹಿಂದೂ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದ್ದು, ಬಿತ್ತಿ ಚಿತ್ರಗಳನ್ನು ಹಿಡಿದು ವಿಶ್ವ ಸಂಸ್ಥೆ ಮಧ್ಯ ಪ್ರವೇಶ ಮಾಡುವಂತೆ ಆಗ್ರಹ ಮಾಡಿದ್ದಾರೆ.
ಬಾಂಗ್ಲಾದೇಶದ ಹಿಂದೂಗಳ ಪರ ನಿಲ್ಲುವಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ. ಬಾಂಗ್ಲಾದೇಶದ ಹಿಂದೂಗಳ ಪರ ನಾವಿದ್ದೇವೆ ಎಂದು ಘೋಷಣೆ ಕೂಗಿದ್ದು, ಹಿಂದೂಗಳ ಪರ ನಿಲ್ಲುವಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಹಿಂದುಗಳು ಭಾಗಿಯಾಗಿದ್ದರು.



