ಕೋಲಾರ: ಕೋಲಾರದಲ್ಲೂ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ, ನಟ ಕಮಲ ಹಾಸನ್ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಕೋಲಾರದಲ್ಲಿ ಕಮಲ್ ಹಾಸನ್ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕಮಲ ಹಾಸನ್ ಫೋಟೋ ತುಳಿಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಕಾರ್ಯಕರ್ತರು ಬ್ಯಾನರ್ ಗೆ ಬೆಂಕಿ ಹಚ್ಚಲು ಮುಂದಾಗಿದ್ದು, ಪೊಲೀಸರು ತಡೆದಿದ್ದಾರೆ. ಮುದಿಯ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ.



