MES ನಿಷೇಧಕ್ಕೆ ಆಗ್ರಹಿಸಿ ವಾಟಾಳ್ ನೇತೃತ್ವದಲ್ಲಿ ಪೊರಕೆ ಹಿಡಿದು ಪ್ರತಿಭಟನೆ!

0
Spread the love

ರಾಮನಗರ:- MES ನಿಷೇಧಕ್ಕೆ ಆಗ್ರಹಿಸಿ ವಾಟಾಳ್ ನೇತೃತ್ವದಲ್ಲಿ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ರಾಮನಗರದ ಐಜೂರು ವೃತ್ತದಲ್ಲಿ ಜರುಗಿದೆ.

Advertisement

ಕರ್ನಾಟಕದಲ್ಲಿ ದಿನೇದಿನೇ ಎಂಇಎಸ್ ಪುಂಡಾಟ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಗ್ರಾ.ಪಂ ಅಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಕನ್ನಡದಲ್ಲಿ ದಾಖಲಾತಿ ನೀಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದರೆ ಅವರ ಪುಂಡಾಟಕ್ಕೆ ಮಿತಿ ಇಲ್ಲದಂತಾಗಿದೆ. ಪದೇಪದೇ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಕೆಲಸವನ್ನು ಎಂಇಎಸ್ ಮಾಡುತ್ತಿದೆ. ಅದಕ್ಕಾಗಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ಎರಡು ಸಾವಿರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಅಖಂಡ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ. ರಾಜ್ಯದ ನೀರಾವರಿ ಯೋಜನೆಗಳು ಶೀಘ್ರ ಜಾರಿಯಾಗಬೇಕು. ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು.

ಇನ್ನೂ ಕ್ಷೇತ್ರ ಪುನರ್ ವಿಂಗಡಣೆ ಖಂಡಿಸಿ ತಮಿಳುನಾಡಿನಲ್ಲಿ ದಕ್ಷಿಣ ರಾಜ್ಯಗಳ ಸಭೆ ಹಿನ್ನೆಲೆ, ತಮಿಳುನಾಡು ಸಿಎಂ ನೇತೃತ್ವದ ಸಭೆಯಲ್ಲಿ ಕರ್ನಾಟಕ ಭಾಗಿಯಾಗದಂತೆ ವಾಟಾಳ್ ಒತ್ತಾಯ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here