ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದನ್ನು ಖಂಡಿಸಿ ಶಿರಹಟ್ಟಿ ಪಟ್ಟಣದಲ್ಲಿ ಆ.22ರಂದು ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕುರುಬ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥ ಘಂಟಿ ಹೇಳಿದರು.
ಅವರು ಶಿರಹಟ್ಟಿಯ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ತಪ್ಪುಗಳಿಗೆ ಅವಕಾಶ ನೀಡದೇ ಸ್ವಚ್ಛ ರಾಜಕಾರಣಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯವರ ಸೂಚನೆ ಮೇರೆಗೆ ವಿಚಾರಣೆಗೆ ಅನುಮತಿ ನೀಡಿರುವುದು ಸರಿಯಲ್ಲ, ತಕ್ಷಣವೇ ರಾಜ್ಯಪಾಲರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದರು.
ತಾಲೂಕಾ ಕುರುಬ ಸಮಾಜದ ಅಧ್ಯಕ್ಷ ಹೊನ್ನೇಶ ಪೋಟಿ, ತಾ.ಪಂ ಸದಸ್ಯ ದೇವಪ್ಪ ಲಮಾಣಿ, ಸಿದ್ದಪ್ಪ ಹೊಸಳ್ಳಿ, ಪ.ಪಂ ಸದಸ್ಯ ಹೊನ್ನಪ್ಪ ಶಿರಹಟ್ಟಿ, ಆನಂದ ಮಾಳೆಕೊಪ್ಪ, ದೇವಪ್ಪ ಬಟ್ಟೂರ, ಪರಶುರಾಮ ಈಳಿಗೇರ, ಮಂಜುನಾಥ ಹುಬ್ಬಳ್ಳಿ, ವಸಂತ ಜಗ್ಗಲರ, ಹನಮಂತ ಕುಳಗೇರಿ, ಮಹೇಂದ್ರ ಉಡಚಣ್ಣವರ, ನಿಂಗಪ್ಪ ಮಾಚೇನಹಳ್ಳಿ ಹನಂಮಂತ ಗೊಜನೂರ ಮತ್ತಿತರರು ಉಪಸ್ಥಿತರಿದ್ದರು.