ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠರ ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಿ, ಮೃತರ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಬಿ. ಗುಣರಂಜನಶೆಟ್ಟಿಯವರ ಸಾರಥ್ಯ ಹಾಗೂ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸರ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷ ಹಾಲಪ್ಪ ಈ.ವರವಿ ಹಾಗೂ ಗದಗ ಜಿಲ್ಲಾ ಅಧ್ಯಕ್ಷ ಸದಾನಂದ ನಂದಣ್ಣವರ ನೇತೃತ್ವದಲ್ಲಿ ಸಂಘಟನೆಯ ವತಿಯಿಂದ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ, ರಾಜ್ಯದಲ್ಲಿ ಇಂತಹ ಪ್ರಕರಣಗಳು ಮೇಲಿಂದ ಮೇಲೆ ಆಗುತ್ತಿದ್ದು, ದುಷ್ಕರ್ಮಿಗಳಿಗೆ ಇಲ್ಲಿಯವರೆಗೂ ಯಾವುದೇ ಕಠಿಣ ಕ್ರಮವನ್ನು ಜಾರಿಗೆ ತರದೇ ಹೋಗಿರುವುದರಿಂದ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಕಾರಣ, ಪ್ರಕರಣಕ್ಕೆ ಸಂಬಂಧಪಟ್ಟ ವ್ಯಕ್ತಿ ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಾಗಿದ್ದರೂ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ನೇಹಾ ಹಿರೇಮಠರ ಕುಟುಂಬಕ್ಕೆ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು. ಈ ಸಂದರ್ಭದಲ್ಲಿ ಸದಾನಂದ ನಂದೆಣ್ಣವರ, ಪ್ರಕಾಶ ಹಿರೇಮಠ, ರೇಖಾ ಜಡಿ, ಮುತ್ತು ಪೂಜಾರ, ವೆಂಕಟೇಶ ಶಾಂತಗೇರಿ, ಗೌಸ ಶಿರಹಟ್ಟಿ ಮುಂತಾದವರು ಉಪಸ್ಥಿತರಿದ್ದರು.
Advertisement