HomeEducationಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ನ್ನುಪ್ರಸ್ತುತ ದಿನಮಾನದಲ್ಲಿ ಶಿಕ್ಷಣವು ಉತ್ತಮ ಭವಿಷ್ಯವನ್ನು ಕಂಡುಕೊಳ್ಳುವುದಕ್ಕೆ ಭದ್ರ ಬುನಾದಿಯಾಗಿದೆ. ಪೋಷಕರು ತಮ್ಮ ಜಮೀನುಗಳ ಮಾರಾಟ ಮಾಡಿದರೂ ಚಿಂತೆಯಿಲ್ಲ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಬೇಕೆಂದು ಹೂವಿನಶಿಗ್ಲಿಯ ಚನ್ನವೀರ ಸ್ವಾಮೀಜಿ ಹೇಳಿದರು.

ಅವರು ಶುಕ್ರವಾರ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಶ್ರೀ ವಿವೇಕಾನಂದ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಿವೇಕೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣ ದೊರೆತ ನಂತರ ಮಕ್ಕಳು ಒಳ್ಳೆಯ ಉದ್ಯೋಗವನ್ನು ಪಡೆದುಕೊಂಡು ಮುಂದೆ ನಿಮಗೆ ಆಶ್ರಯದಾತರಾಗಲು ಸಹಾಯವಾಗುತ್ತದೆ. ವಿದ್ಯಾರ್ಥಿಗಳಾದವರೂ ಸಹ ಪಾಲಕರು ನಿಮ್ಮ ಬಗ್ಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಅವುಗಳನ್ನು ನನಸಾಗಿಸಿ, ಎಲ್ಲ ದಾನಕ್ಕಿಂತ ಶ್ರೇಷ್ಠದಾನ ವಿದ್ಯಾದಾನವಾಗಿದೆ.

ಇದನ್ನು ಬೆಳ್ಳಟ್ಟಿಯಲ್ಲಿ ಶಿವಪ್ರಕಾಶ ಮಹಾಜನಶೆಟ್ಟರ ತಮ್ಮ ಸಂಸ್ಥೆಯ ಮೂಲಕ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ. ಆ ಹೊರೆಯನ್ನು ಪಾಲಕರು ಕಡಿಮೆ ಮಾಡಬೇಕು. ಶಿಕ್ಷಣದ ಜೊತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಸಹ ನೀಡುವುದು ಅವಶ್ಯವಿದೆ. ಒಳ್ಳೆಯ ಉದ್ಯೋಗದಲ್ಲಿರುವ ನೌಕರಸ್ಥರ ತಂದೆ-ತಾಯಿಗಳು ವೃದ್ಧಾಶ್ರಮಗಳಲ್ಲಿ ಇರುವುದನ್ನು ಕಾಣುತ್ತಿದ್ದೇವೆ. ಇದು ವಿಷಾದದ ಸಂಗತಿ. ಹಿರಿಯರನ್ನು ಗೌರವದಿಂದ ಕಂಡು, ಸಂಬಂಧಿಕರೊಡನೆ ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ಹೇಳಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಕೆ.ಎ. ಬಳಿಗೇರ ಮಾತನಾಡಿದರು. ಸಾವಿರಾರು ಸಂಖ್ಯೆಯಲ್ಲಿ ಪಾಲಕರು, ಸಂಬಂಧಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಮಕ್ಕಳ ಪ್ರತಿಭೆಯನ್ನು ವೀಕ್ಷಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ, ಚಂದ್ರಕಾAತ ನೂರಶೆಟ್ಟರ, ಎನ್.ಎನ್. ಗೋಕಾವಿ, ಜಿ.ಕೆ. ಬೆಲಹುಣಸಿ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಶಂಕರ ಮರಾಠೆ, ಗಿರೀಶ ಕೊಡಬಾಳ, ಎಂ.ಬಿ. ಹಾವೇರಿ, ಮಂಜುನಾಥ ಅಂಗಡಿ, ಮುತ್ತು ಅಳವಂಡಿ, ಎಂ.ಸಿ. ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಶಿವಪ್ರಕಾಶ ಮಹಾಜನಶೆಟ್ಟರ ಮಾತನಾಡಿ, ಬೆಳ್ಳಟ್ಟಿಯೂ ಸೇರಿದಂತೆ ಈ ಭಾಗದಲ್ಲಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದಕ್ಕಾಗಿ ನುರಿತ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡು ಇಲಾಖೆಯ ಮಾರ್ಗದರ್ಶನದಂತೆ ಶಿಕ್ಷಣವನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ, ಕ್ರೀಡೆ ಮತ್ತು ಉತ್ತಮ ಸಂಸ್ಕಾರವAತರಾಗಿ ಹೊರಹೊಮ್ಮುವುದಕ್ಕೆ ತಜ್ಞರನ್ನು ಕರೆಯಿಸಿ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img