HomeGadag Newsಬೀದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸಿ

ಬೀದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಸಣ್ಣಪುಟ್ಟ ವ್ಯಾಪಾರ ಮಾಡುತ್ತ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಮಾಡುವ ಮುಖಾಂತರ ಅವರ ಜೀವನೋಪಾಯದ ಹಕ್ಕು, ಸಂರಕ್ಷಣೆಯನ್ನು ಖಾತ್ರಿಪಡಿಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.

ಪಟ್ಟಣದ ಸೇವಾಲಾಲ್ ಸಮುದಾಯ ಭವನದಲ್ಲಿ ನಡೆದ ಗಜೇಂದ್ರಗಡ ತಾಲೂಕಾ ಬೀದಿಬದಿ ವ್ಯಾಪಾರಿಗಳ ಸಂಘದ (ಸಿಐಟಿಯು)ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೀದಿ ವ್ಯಾಪಾರಿಗಳನ್ನು ಒಂದು ಸಮಸ್ಯೆಯಾಗಿ ನೋಡುವ ಬದಲು ಅವರನ್ನು ನಗರ ಆರ್ಥಿಕತೆಯ ಪ್ರಮುಖ ಭಾಗವೆಂದು ಗುರುತಿಸುವತ್ತ ಸಾಗಬೇಕಿದೆ. ಬೀದಿಬದಿ ವ್ಯಾಪಾರಿಗಳು ಅಸಂಘಟಿತ ಕಾರ್ಮಿಕರಾಗಿದ್ದು, ಸರಕಾರ ಅವರಿಗೆ ಯೋಗ್ಯ ಬಡ್ಡಿರಹಿತ ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಡಿವಾಯ್‌ಎಫ್‌ಐ ಜಿಲ್ಲಾ ಮುಖಂಡರಾದ ದಾವಲಸಾಬ ತಾಳಿಕೋಟಿ, ಫಯಾಜ್ ತೋಟದ ಮಾತನಾಡಿ, ಸರ್ಕಾರ ಬೀದಿ ಬದಿ ವ್ಯಾಪಾರಿಗಳ ಹಿತರಕ್ಷಣೆಗಾಗಿ ಪ್ರತ್ಯೇಕ ಕಾಯ್ದೆ ರೂಪಿಸಿದ್ದರೂ ಅದರ ಪರಿಣಾಮಕಾರಿ ಅನುಷ್ಠಾನದತ್ತ ಇಲ್ಲಿನ ಸ್ಥಳೀಯ ಸಂಸ್ಥೆ ಗಮನ ಹರಿಸಿಲ್ಲ. ಹೀಗಾಗಿ ಇಲ್ಲಿನ ಬೀದಿ ಬದಿ ವ್ಯಾಪಾರಿಗಳು ಸಾಮಾಜಿಕ ಭದ್ರತೆ ಇಲ್ಲದೆ ಬಳಲುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ನೆಲೆ ಕಲ್ಪಿಸಬೇಕು ಎಂಬ ವಿಷಯ ಆಗಾಗ ಮುನ್ನೆಲೆಗೆ ಬಂದರೂ ನಂತರ ಅದು ಹಿಂದಕ್ಕೆ ಸರಿಯುತ್ತಿದೆ. ಹೀಗಾಗಿ ಸದಾ ಅಭದ್ರತೆಯಲ್ಲೇ ಬೀದಿ ಬದಿ ವ್ಯಾಪಾರಿಗಳು ಜೀವನ ನಿರ್ವಹಿಸುವಂತಾಗಿದೆ. ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಯ ಹಿಂದೆ ಒಂದು ಕುಟುಂಬವಿದೆ ಎಂಬ ಮಾನವೀಯ ಅಂತಃಕರಣದ ದೃಷ್ಟಿಕೋನ ಆಡಳಿತ ನಡೆಸುವವರಿಗೆ ಬೇಕಿದೆ ಎಂದರು.

ಕಾರ್ಯಗಾರದಲ್ಲಿ ಎಸ್.ಎಫ್. ಐನಗಣೇಶ ರಾಠೋಡ, ಮೈಬು ಹವಾಲ್ದಾರ್, ಅನ್ವರಭಾಷಾ ಹಿರೇಕೊಪ್ಪ, ರೂಪೇಶ ಮಾಳೋತ್ತರ, ಅಂಬರೀಶ್ ಚವ್ಹಾಣ, ಕಳಕಪ್ಪ ಮಾಳೋತ್ತರ, ಮೆಹಬೂಬ್ ಮಾಲ್ದಾರ, ರಾಜು ಮಾಂಡ್ರೆ, ಚೌಡಮ್ಮ ಯಲ್ಪು, ಮಂಜುಳಾ ಪಮ್ಮಾರ, ಪರುಶರಾಮ ಬಡಿಗೇರ, ವಿಷ್ಣು ಚಂದುಕರ ಸೇರಿದಂತೆ ನೂರಾರು ಬೀದಿ ಬದಿ ವ್ಯಾಪಾರಸ್ಥರು ಪಾಲ್ಗೊಂಡಿದ್ದರು.

ಕೃಷಿ ಕೂಲಿಕಾರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ, ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲೂಕಾ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, ಬೀದಿ ಬದಿ ವ್ಯಾಪಾರ ನಂಬಿ ಪಟ್ಟಣದಲ್ಲಿ ನೂರಾರು ಬಡ ಕುಟುಂಬಗಳು ಬದುಕುತ್ತಿವೆ. ರಾಜಕೀಯ ದೊಂಬರಾಟಕ್ಕೆ ಆತಂಕದಲ್ಲೇ ಜೀವನ ಕಳೆಯುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿದ ನಂತರ ತೆರವುಗೊಳಿಸಬೇಕು. ಕಾನೂನಿನ ಚೌಕಟ್ಟಿನಲ್ಲಿದ್ದರೆ ಬೀದಿ ಬದಿ ವ್ಯಾಪಾರಸ್ಥರಿಗೆ ಬದುಕಲು ಅವಕಾಶ ಕೊಡಬೇಕು. ಆದರೆ, ರಾಜಕೀಯ ನಾಯಕರ ದೊಂಬರಾಟದ ಫಲವಾಗಿ ಈಗ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!