ಪ್ರಚೋದನಾಕಾರಿ ಭಾಷಣ ಕೇಸ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

0
Spread the love

ಬೆಂಗಳೂರು:- ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ ಆದೇಶ ಹೊರಡಿಸಿ, ಜೂನ್ 10ಕ್ಕೆ ವಿಚಾರಣೆ ಮುಂದೂಡಿದ್ದಾರೆ.

Advertisement

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್​ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್​ಎಸ್​​ 353(2)ರಡಿ ಪ್ರಕರಣದಡಿ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.


Spread the love

LEAVE A REPLY

Please enter your comment!
Please enter your name here