ವಿಜಯಪುರ:- ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಎರಡು ತಿಂಗಳುಗಳ ಕಾಲ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
Advertisement
ಜಿಲ್ಲಾಧಿಕಾರಿ ಆನಂದ್ ಕೆ. ಅವರು ಹೊರಡಿಸಿದ ಆದೇಶದಂತೆ, ಅಕ್ಟೋಬರ್ 16ರಿಂದ ಡಿಸೆಂಬರ್ 15ರವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕನ್ನೇರಿ ಶ್ರೀಗಳು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಬಂಧ ವಿಧಿಸಲಾಗಿದೆ.
ಇದೇ ವೇಳೆ, ಶ್ರೀಗಳು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆಯುವ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುವ ಯೋಜನೆ ಹೊಂದಿದ್ದರು ಎಂದು ತಿಳಿದುಬಂದಿದೆ.