ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR!

0
Spread the love

ವಿಜಯಪುರ:- ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹೇಳಿಕೆ ಕೊಟ್ಟ ಆರೋಪದಡಿ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಶಾಸಕ ಯತ್ನಾಳ್ ವಿರುದ್ಧ FIR ದಾಖಲಾಗಿದೆ.

Advertisement

ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಯತ್ನಾಳ್, ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂದಿದ್ದರು. ಈ ಬೆನ್ನಲ್ಲೇ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮೊಹಮ್ಮದ್ ಹನ್ನಾನ್ ಎಂಬವರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಇದೀಗ FIR ದಾಖಲಾಗಿದೆ.

ಪೈಗಂಬರ್ ಬಗ್ಗೆ ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಯತ್ನಾಳ್ ಹೇಳಿಕೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


Spread the love

LEAVE A REPLY

Please enter your comment!
Please enter your name here