ಯಾದಗಿರಿ:- ನಿನ್ನೆ ವರ್ಗಾವಣೆಗೊಂಡು ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್ಐ ಹೃದಯಾಘಾತದಿಂದ ನಿಧನರಾಗಿದ್ದಾರೆ.
Advertisement
ಪಿಎಸ್ಐ “ಪರಶುರಾಮ್” ಮೃತ ದುರ್ದೈವಿ ಎನ್ನಲಾಗಿದೆ. ಕಳೆದ ಒಂದೂವರೆ ವರ್ಷದಿಂದ ನಿಷ್ಠಾವಂತ ಅಧಿಕಾರಿಯಾಗಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಪರಶುರಾಮ್ ಸೇವೆ ಸಲ್ಲಿಸುತ್ತಿದ್ದರು.
ಇವರು ನಿನ್ನೆ ಅಷ್ಟೇ ಯಾದಗಿರಿಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಆಗಿದ್ರು. ಹಿನ್ನೆಲೆಯಲ್ಲಿ ಅವರ ಸಹೋದ್ಯೋಗಿಗಳು ಹಾಗೂ ಪೊಲೀಸ್ ಇಲಾಖೆ ಇತರ ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭ ಮಾಡಿದ್ದರು.
ಆದರೆ ರಾತ್ರಿ ಹೃದಯಾಘಾತದಿಂದ ನಿಧನರಾಗಿರೋದು ಎಲ್ಲರಿಗೂ ಆಘಾತ ಉಂಟುಮಾಡಿದೆ.