ಬೆಂಗಳೂರು: ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕ-ಯುವತಿ ನಡುವಿನ ಪರಿಚಯ ಪ್ರೀತಿಗೆ ತಿರುಗಿ, ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವಾಗಿತ್ತು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯ ವಿಚಿತ್ರ ಹಾಗೂ ಮಾನಸಿಕ ಕಿರುಕುಳದ ವರ್ತನೆಯಿಂದ ಪತ್ನಿ ಕಂಗಾಲಾಗಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಹೆಚ್‌ಆರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 3, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ನಂತರ ಮಂಜುನಾಥ್ ಸೈಕೋ ರೀತಿಯಲ್ಲಿ ವರ್ತಿಸಲು ಆರಂಭಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ.
ಮಂಜುನಾಥ್ ಮೊಬೈಲ್ ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಾನೆ. ಅಲ್ಲದೆ, ಮನೆಯಲ್ಲಿ ಅತ್ತೆ-ಮಾವನ ಮುಂದೆಯೇ ಬಟ್ಟೆ ಇಲ್ಲದೆ ಓಡಾಡುವುದು, ಪ್ಯಾಸೇಜ್‌ಗೆ ಹೋಗಿ ಅಕ್ಕಪಕ್ಕದವರಿಗೆ ಮುಜುಗರ ಉಂಟುಮಾಡುವುದು ಸೇರಿದಂತೆ ಅಸಹಜ ವರ್ತನೆ ತೋರುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಇದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದನೆ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ತನಗೆ ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಮತ್ತು ಮಾನಸಿಕವಾಗಿ ಹಿಂಸೆಕೊಟ್ಟಿದ್ದ ಗಂಡ ಮಂಜುನಾಥ್ ಮನೆ ಬಿಟ್ಟು ಹೋಗಿದ್ದ., ಬಹಲ್ಲೆಗೂ ಯತ್ನಿಸಿದ್ದಾನೆ.
ಆತನ ಈ ಕೃತ್ಯಕ್ಕೆ ತನ್ನ ಅತ್ತೆ ಮತ್ತು ಮಾವ ಕೂಡ ಬೆಂಬಲ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಗಂಡನ ನಿರಂತರ ಕಿರುಕುಳದಿಂದ ಬೇಸತ್ತ ಪತ್ನಿ, ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



