ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ 23 ವರ್ಷಗಳಿಂದಲೂ `ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ’ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಪ್ರಶಸ್ತಿಗಾಗಿ 2024-25ನೇ ಸಾಲಿನಲ್ಲಿ ಪ್ರಕಟವಾದ ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. ಆದರೆ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿಕಾರರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.

Advertisement

ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಸಾಹಿತಿಗಳಿಗೆ ದಾಂಡೇಲಿಯಲ್ಲಿ ಹಮ್ಮಿಕೊಂಡಿರುವ ಡಾ. ಪಂ. ಪುಟ್ಟರಾಜರ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿಧ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿರತ್ನ ಸಮ್ಮಾನ ನೀಡಿ ಗೌರವಿಸಲಾಗುವುದು ಎಂದು ಸೇವಾ ಸಮಿತಿಯ ರಾಜ್ಯ ಸಂಚಾಲಕರು ಮತ್ತು ಸಾಹಿತ್ಯ ಪುರಸ್ಕಾರ ಆಯ್ಕೆ ಸಮಿತಿಯ ಸದಸ್ಯ ಸಂಚಾಲಕರೂ ಆಗಿರುವ ಡಾ. ಸುಮಾ ಹಡಪದ ಹಳಿಯಾಳ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಲೇಖಕರು ತಮ್ಮ ಭಾವಚಿತ್ರ ಸಹಿತ ಪರಿಚಯ ಪತ್ರ, ಎಪ್ರಿಲ್ 1, 2024ರಿಂದ 2025 ಮಾರ್ಚ್ 31ರ ಒಳಗಾಗಿ ಪ್ರಕಟವಾದ 3 ಕೃತಿಗಳೊಂದಿಗೆ ಆಗಸ್ಟ್ 15ರ ಒಳಗಾಗಿ ತಲುಪುವಂತೆ ಸಿ. ಕೆ. ಹೆಚ್ ಶಾಸ್ತ್ರಿ (ಕಡಣಿ) ಸದಸ್ಯರು, ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ, ‘ಸಮನ್ವಯ’ # 332, ಕೆ.ಹೆಚ್.ಬಿ ಕಾಲೋನಿ, ರಾಜೀವಗಾಂಧಿ ನಗರ, ಗದಗ-582101 (ವಾಟ್ಸಪ್-9886717732) ಇಲ್ಲಿಗೆ ತಲುಪುವಂತೆ ಕಳಿಸಲು ಕೋರಲಾಗಿದೆ.


Spread the love

LEAVE A REPLY

Please enter your comment!
Please enter your name here