ವಿಜಯಸಾಕ್ಷಿ ಸುದ್ದಿ, ಗದಗ : ಗಾನಯೋಗಿ, ಶಿವಯೋಗಿ ಡಾ. ಪಂಡಿತ್ ಪುಟ್ಟರಾಜ ಗವಾಯಿಗಳವರ 14ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಡಾ. ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳ ಸದ್ಭಕ್ತರ ವತಿಯಿಂದ ಮುಳುಗುಂದ ರೋಡ್ ಫತ್ತೆಪೂರ ಬಿಲ್ಡಿಂಗ್‌ನಲ್ಲಿ ಸೆ.13ರ ಬೆಳಿಗ್ಗೆ 9ಕ್ಕೆ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರ ಸಾನ್ನಿಧ್ಯದಲ್ಲಿ ಮಹಾಪೂಜೆ, ಮಧ್ಯಾಹ್ನ 12.10ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Advertisement
ಸದ್ಭಕ್ತರು ಆಗಮಿಸಿ ಲಿಂ. ಡಾ. ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳರವರ ಕೃಪೆಗೆ ಪಾತ್ರರಾಗಬೇಕೆಂದು ಕರವೇ ಗದಗ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಮಾಲಿಪಾಟೀಲ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.