ಅನಾರೋಗ್ಯದಿಂದ ಕಾಲೇಜಿನ ಹಾಸ್ಟೆಲ್ ವೊಂದರಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿಯಾಗಿದ್ದು, ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ.
Advertisement
ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಏಕಾಏಕಿ ಅನಾರೋಗ್ಯ ಉಂಟಾಗಿದ್ದ ಕಾರಣ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ. ಇನ್ನೂ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.