Home Gadag News ಸಾರ್ವಜನಿಕ ಸೇವೆಯೇ ಬಿಜೆಪಿಯ ಸಂಕಲ್ಪ: ಶಾಸಕ ಸುರೇಶ್‌ಕುಮಾರ್

ಸಾರ್ವಜನಿಕ ಸೇವೆಯೇ ಬಿಜೆಪಿಯ ಸಂಕಲ್ಪ: ಶಾಸಕ ಸುರೇಶ್‌ಕುಮಾರ್

0
ಸಾರ್ವಜನಿಕ ಸೇವೆಯೇ ಬಿಜೆಪಿಯ ಸಂಕಲ್ಪ: ಶಾಸಕ ಸುರೇಶ್‌ಕುಮಾರ್
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ವಿಮಲ್ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026ರ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸುರೇಶ್‌ಕುಮಾರ್, ಸಾರ್ವಜನಿಕ ಸೇವೆಯನ್ನೇ ಬಿಜೆಪಿ ತನ್ನ ಸಂಕಲ್ಪವನ್ನಾಗಿ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್, ಸ್ವನಿಧಿ, ಮುದ್ರಾ ಸೇರಿದಂತೆ ಹಲವು ಯೋಜನೆಗಳು ಕೋಟ್ಯಂತರ ಜನರ ಬದುಕಿನಲ್ಲಿ ಬದಲಾವಣೆ ತಂದಿವೆ. ಜಾಗತಿಕ ಉದ್ವಿಗ್ನತೆ, ವ್ಯಾಪಾರ ಅಡೆತಡೆ ಹಾಗೂ ಬದಲಾಗುತ್ತಿರುವ ಪರಿಸ್ಥಿತಿಯ ನಡುವೆಯೂ ಭಾರತವು ಶಾಂತಿ, ಸ್ವಾವಲಂಬನೆ ಹಾಗೂ ಸಮಗ್ರ ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಬಡವರ ಕಲ್ಯಾಣ ಹಾಗೂ ರೈತರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ. ರೈತರ ಸಾಂಪ್ರದಾಯಿಕ ಜ್ಞಾನ, ವಿಜ್ಞಾನದ ಶಕ್ತಿ ಹಾಗೂ ಸರ್ಕಾರದ ಬೆಂಬಲ ಒಂದಾದಾಗ ವಿಕಸಿತ ಭಾರತದ ಕನಸು ನನಸಾಗಲಿದೆ ಎಂದು ಹೇಳಿದರು. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಮಾ. ನಾಗರಾಜ, ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಕಳಕಪ್ಪ ಜಿ. ಬಂಡಿ, ರಾಜ್ಯ ಪ್ರಶಿಕ್ಷಣ ಸಂಚಾಲಕ ನಾಗಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಆರ್.ಕೆ. ಚವ್ಹಾಣ, ಪಕ್ಕೀರೇಶ ರಟ್ಟಿಹಳ್ಳಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

“ಸಾರ್ವಜನಿಕ ಸೇವೆಯೇ ಬಿಜೆಪಿಯ ಮೂಲ ಸಂಕಲ್ಪ. ಜನಪರ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವುದು ನಮ್ಮ ಗುರಿಯಾಗಿದೆ.”

– ಸುರೇಶ್‌ಕುಮಾರ್, ಮಾಜಿ ಸಚಿವ ಹಾಗೂ ಶಾಸಕ


Spread the love

LEAVE A REPLY

Please enter your comment!
Please enter your name here