HomeBengaluru Newsಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಪಬ್‌ಗಳು ಓಪನ್!? ಡಿಕೆ ಶಿವಕುಮಾರ್!

ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಪಬ್‌ಗಳು ಓಪನ್!? ಡಿಕೆ ಶಿವಕುಮಾರ್!

For Dai;y Updates Join Our whatsapp Group

Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಪಬ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನಗರದ ನೈಟ್​ಲೈಫ್ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆ ಕಲಾಪದಲ್ಲಿ ಮಹತ್ವದ ಅಪ್​ಡೇಟ್ ನೀಡಿದ್ದಾರೆ. ಬೆಂಗಳೂರಿನ ನಗರ ಅಂತರಾಷ್ಟ್ರೀಯ ಖ್ಯಾತಿ ಹೊಂದಿದ್ದು, ಲೈವ್ ಆಗಿರಬೇಕು. ಈ ಕಾರಣಕ್ಕೆ ತಡರಾತ್ರಿ 1 ಗಂಟೆವರೆಗೆ ಪಬ್ ತೆರೆಯಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ತಡರಾತ್ರಿವರೆಗೆ ಕಾರ್ಯಾಚರಣೆಗೆ ಪಬ್​​ಗಳಿಗೆ ಆಕಾಶ ನೀಡುವ ವಿಚಾರವಾಗಿ ಬಿಜೆಪಿಯ ಎಚ್ಎಸ್ ಗೋಪಿನಾಥ್ ಅವರು ವಿಧಾನಸಭೆ ಕಲಾಪದಲ್ಲಿ ಗಮನ ಸೆಳೆದರು. ಇದಕ್ಕೆ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಉತ್ತರಿಸುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್, ಬೆಳಗ್ಗೆ 10ರಿಂದ ರಾತ್ರಿ 11.30 ರ ವರೆಗೆ ಕಾರ್ಯಾಚರಣೆ ನಡೆಸಲು ಪಬ್​ಗಳಿಗೆ ಅವಕಾಶ ಇದೆ. ರೆಸ್ಟೋರೆಂಟ್​ಗಳಿಗೆ ಹೊಂದಿಕೊಂಡಿರುವ ಪಬ್​ಗಳಿಗೆ ರಾತ್ರಿ 1 ಗಂಟೆವರೆಗೆ ತೆರೆದಿರಲು ಅವಕಾಶವಿದೆ. ಇದನ್ನೇ ಎಲ್ಲಾ ಪಬ್​ಗಳಿಗೂ ಅನ್ವಯಿಸುವಂತೆ ಮಾಡಬೇಕಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!